ಅಮೆರಿಕನ್ನಡ
Amerikannada
ಗುರುವಂದನಾ
-ಜ್ಯೋತಿ ಮಹದೇವ್, ಅಮೆರಿಕಾ
ವಯೋವೃದ್ಧ ಜ್ಞಾನವೃದ್ಧ ಪ್ರೀತಿಬದ್ಧರು
ಕಣ್ಣ ಬೆಳಕ ಹೃದಯದೊಳಗೆ ಇಳಿಸಿಬಿಡುವರು
ಮಾತೆ-ಮಮತೆ, ಅನ್ನಪೂರ್ಣೆ, ಒಲವ ಕೊಡುವರು
ತಂದೆ-ಶಿಸ್ತು, ಮಾರ್ಗದರ್ಶಿ, ಬಲವ ಬೆಳೆವರು

ಕೈಯ ಹಿಡಿದು ಹೆಜ್ಜೆಯಿರಿಸಿ ಗುರಿಯ ತೋರ್ವರು
ಸಾಧನೆಯಲಿ ಸಂಗ ನೀಡಿ ಗರಿಯನೀವರು
ಅಂತರಂಗ ಸಖ್ಯಕೊಂದು ಅರ್ಥವಿತ್ತರು
ಆತ್ಮದೌನ್ನತ್ಯದಾ ದಾರಿ ತೆರೆದರು

ಕನ್ನಡತನ ಕನ್ನಡಮನ ಕನ್ನಡವುಸಿರು
ಕಂಡವರಿಗೆ ಸುಜ್ಞಾನವ ಉಣಿಸುವ ಬೇರು
ಬಿಟ್ಟರಿಲ್ಲ ಇವರಿಗೆ ಸಮ, ಯಾವ ದೇಶ ಊರು
ನಂದಿನಿ ಮಿಗೆ ಸುಮನೆಯರಿಗೆ ‘ಹನಾಸುನಂ’ ತೌರು

ಹರಿಗೆ ಲಕ್ಷ್ಮಿ, ಹರಗೆ ನಾಗ, ಈಶ ಪಂಡಿತ
ನಮನಯೋಗ್ಯರಿವರು- ಜೋಡು ಶಾರದಾಂಕಿತ